ದುಬೈ: ಐಪಿಎಲ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಫಿಸಿಯೋಥೆರಪಿಸ್ಟ್ಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ದುಬೈಗೆ ಆಗಮಿಸಿದ ಸಂದರ್ಭದಲ್ಲಿ ನಡೆಸಿದ ಎರಡು ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿತ್ತು. ಆದರೆ ಇದೀಗ ಮೂರನೇ ಬಾರಿ ಪರೀಕ್ಷೆ ನಡೆಸಿದ್ದು, ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಕ್ವಾರಂಟೈನ್ಗೆ ಒಳಪಟ್ಟಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್, "ತಂಡದ ಸದಸ್ಯರು ಯಾರೂ ಸಹ ಅವರ ಸಂಪರ್ಕಕ್ಕೆ ಬಂದಿಲ್ಲ. ಸದ್ಯ ಅವರು 14 ದಿನಗಳ ಕಾಲ ದುಬೈನ ಐಪಿಎಲ್ ಐಸೋಲೇಷನ್ ಫೆಸಿಲಿಟಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇನ್ನೂ ಎರಡು ಪರೀಕ್ಷೆಗಳು ನಡೆಯಲಿದ್ದು, ಅದರಲ್ಲಿ ನೆಗೆಟಿವ್ ಬಂದರೆ ತಂಡದಲ್ಲಿ ಭಾಗಿಯಾಗಲಿದ್ದಾರೆ" ಎಂದು ಹೇಳಿದೆ.
ಫ್ರ್ಯಾಂಚೈಸಿಯ ವೈದ್ಯಕೀಯ ತಂಡ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.
ಐಪಿಎಲ್ 2020 ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿದ್ದು, ದುಬೈ, ಅಬುಧಾಬಿ ಮತ್ತು ಶಾರ್ಜಾದ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ.