ಅಬುಧಾಬಿ: ಐಪಿಎಲ್ನ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಎರಡು ಬಲಿಷ್ಠ ತಂಡಗಳು ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿವೆ. ಮುಂಬೈ ಇಂಡಿಯನ್ಸ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ಗಳ ಸೋಲುಕಂಡಿತ್ತು. ಹಾಗಾಗಿ ಈ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳುವ ಆಲೋಚನೆಯಲ್ಲಿದೆ.
ಕೆಕೆಅರ್ ಇಂದಿನ ಪಂದ್ಯದಲ್ಲಿ ಇಯಾನ್ ಮಾರ್ಗನ್, ಪ್ಯಾಟ್ ಕಮ್ಮಿನ್ಸ್, ರಸೆಲ್ ಮತ್ತು ನರೈನ್ ರನ್ನು ಕಣಕ್ಕಿಳಿಸುತ್ತಿದೆ. ಇಂದಿನ ಪಂದ್ಯದಲ್ಲಿ ನರೈನ್ ಜೊತೆ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.