ಅಬುಧಾಬಿ:ರೋಹಿತ್ ಶರ್ಮಾರ ಸ್ಫೋಟಕ ಅರ್ಧಶತಕ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ಬಲದಿಂದ ಮುಂಬೈ ಇಂಡಿಯನ್ಸ್ 49 ರನ್ಗಳಿಂದ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಜಯಗಳಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ್ದ ಮುಂಬೈ ಇಂಡಿಯನ್ಸ್ ತಂಡ ನಾಯಕ ರೋಹಿತ್ ಶರ್ಮಾರ 80 ರನ್ ಹಾಗೂ ಸೂರ್ಯಕುಮಾರ್ರ 47 ರನ್ಗಳ ನೆರವಿನಿಂದ 5 ವಿಕೆಟ್ ಕಳೆದುಕೊಂಡು 195 ರನ್ಗಳಿಸಿತ್ತು. ಈ ಮೊತ್ತವನ್ನು ಬೆನ್ನತ್ತಿದ ಕೆಕೆಆರ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 146 ರನ್ಗಳಿಸಿ 49 ರನ್ಗಳ ಸೋಲು ಕಂಡಿತು.
ಆರಂಭದಿಂದಲೇ ಮುಂಬೈ ಬೌಲರ್ಗಳು ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್ಮನ್ಗಳ ಮೇಲುಗೈ ಸಾಧಿಸಿದರು. ಆರಂಭಿಕನಾಗಿ ಬಡ್ತಿ ಪಡೆದಿದ್ದ ಶುಬ್ಮನ್ ಗಿಲ್ 11 ಎಸೆತಗಳಲ್ಲಿ ಕೇವಲ 7 ರನ್ಗಳಿಸಿ ಬೌಲ್ಟ್ ಓವರ್ನಲ್ಲಿ ಪೊಲಾರ್ಡ್ಗೆ ಕ್ಯಾಚ್ ನೀಡಿ ಔಟಾದರೆ, ನರೈನ್ 10 ಎಸೆತಗಳಲ್ಲಿ 9 ರನ್ಗಳಿಸಿ ಪ್ಯಾಟಿನ್ಸನ್ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ನಾಯಕ ದಿನೇಶ್ ಕಾರ್ತಿಕ್(30) ಹಾಗೂ ನಿತೀಶ್ ರಾಣಾ(24) 3ನೇ ವಿಕೆಟ್ಗೆ 46 ರನ್ಗಳ ಜೊತೆಯಾಟ ನಡೆಸಿ ಚೇತರಿಕೆ ನೀಡಲು ಪ್ರಯತ್ನಿಸಿದರು. ಆದರೆ ದಿನೇಶ್ ಕಾರ್ತಿಕ್ರನ್ನು ರಾಹುಲ್ ಚಹಾರ್ ಎಲ್ಬಿಡಬ್ಲಯೂ ಬಲೆಗೆ ಬೀಳಿಸಿದರು. ಮುಂದಿನ ಓವರ್ನಲ್ಲೇ ಪೊಲಾರ್ಡ್ ಓವರ್ನಲ್ಲಿ ರಾಣಾ ಕೂಡ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿ ಔಟಾದರು.