ಕರ್ನಾಟಕ

karnataka

ETV Bharat / sports

ಫಿಟ್​ ಆದ ರಿಷಭ್​... ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ! - ಡೆಲ್ಲಿ ತಂಡದ ವಿಕೆಟ್​ ಕೀಪರ್ ಪಂತ್​

ಕಳೆದ ಕೆಲ ದಿನಗಳ ಹಿಂದೆ ಕಾಲಿನ ಗಾಯಕ್ಕೊಳಗಾಗಿ ತಂಡದಿಂದ ಹೊರಬಿದ್ದಿದ್ದ ಡೆಲ್ಲಿ ತಂಡದ ವಿಕೆಟ್​ ಕೀಪರ್​ ರಿಷಭ್​ ಪಂತ್​ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

Rishabh Pant
Rishabh Pant

By

Published : Oct 20, 2020, 3:04 PM IST

ದುಬೈ:ಗಾಯಗೊಂಡು ತಂಡದಿಂದ ಹೊರಬಿದ್ದಿದ್ದ ಡೆಲ್ಲಿ​ ತಂಡದ ವಿಕೆಟ್​ ಕೀಪರ್​ ರಿಷಭ್​ ಪಂತ್​ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಪಂಜಾಬ್​​ ವಿರುದ್ಧ ಇಂದು ಡೆಲ್ಲಿ ಕ್ಯಾಪಿಟಲ್​ ಸೆಣಸಾಟ ನಡೆಸಲಿದ್ದು, ಈ ವೇಳೆ ವಿಕೆಟ್​ ಕೀಪಿಂಗ್​ ಜವಾಬ್ದಾರಿ ನಿರ್ವಹಿಸುವ ಸಾಧ್ಯತೆ ಇದೆ. ರಾಜಸ್ಥಾನ ರಾಯಲ್ಸ್​​ ವಿರುದ್ಧ ನಡೆದ ಪಂದ್ಯದ ವೇಳೆ ಕಾಲಿನ ಗಾಯಕ್ಕೊಳಗಾಗಿದ್ದ ವಿಕೆಟ್​ ಕೀಪರ್​​ಗೆ ಒಂದು ವಾರಗಳ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದರು.

ಡೆಲ್ಲಿ ಕ್ಯಾಪ್ಟನ್ ಶ್ರೇಯಸ್​ ಅಯ್ಯರ್​​

ಇದೇ ವಿಚಾರವಾಗಿ ಮಾತನಾಡಿದ್ದ ಕ್ಯಾಪ್ಟನ್​​ ಶ್ರೇಯಸ್​ ಅಯ್ಯರ್​, ಒಂದು ವಾರಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚನೆ ನೀಡಿದ್ದರಿಂದ ಮುಂದಿನ ಕೆಲ ಪಂದ್ಯಗಳಿಂದ ರಿಷಭ್ ಹೊರಗುಳಿಯಲಿದ್ದಾರೆ ಎಂದಿದ್ದರು. ಇದೀಗ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ತಂಡ ಸೇರಿಕೊಳ್ಳಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ಇಲ್ಲಿಯವರೆಗೆ 9 ಪಂದ್ಯಗಳನ್ನಾಡಿದ್ದು, ಅದರಲ್ಲಿ 7 ಗೆಲುವು ಸಾಧಿಸಿ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.

ABOUT THE AUTHOR

...view details