ಅಬುಧಾಬಿ:13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 11 ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸತತ ಎರಡು ಗೆಲುವು ಪಡೆದು ಮುನ್ನುಗ್ಗುತ್ತಿರುವ ಡೆಲ್ಲಿ ಕ್ಯಾಪಿಟಲ್ ತಂಡ ಸನ್ರೈಸರ್ಸ್ ವಿರುದ್ಧವೂ ತನ್ನ ಜಯದ ಓಟವನ್ನು ಮುಂದುವರಿಸುವ ಬಯಕೆಯಲ್ಲಿದೆ. ಈ ಪಂದ್ಯದಲ್ಲಿ ಅವೇಶ್ ಖಾನ್ ಬದಲಿಗೆ ಅನುಭವಿ ವೇಗಿ ಇಶಾಂತ್ ಶರ್ಮಾರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಇತ್ತ ಮೊದಲೆರಡು ಪಂದ್ಯಗಳಲ್ಲಿ ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿರುವ ಸನ್ರೈಸರ್ಸ್ ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಹೈದರಾಬಾದ್ ತಂಡ ಈ ಪಂದ್ಯದಲ್ಲಿ 2 ಬದಲಾವಣೆಗಳನ್ನು ಮಾಡಿಕೊಂಡಿದೆ. ನಬಿ ಬದಲಿಗೆ ಕೇನ್ ವಿಲಿಯಮ್ಸನ್ ಮತ್ತು ವೃದ್ಧಿಮಾನ್ ಸಹಾ ಬದಲಿಗೆ ಅಬ್ಧುಲ್ ಸಮದ್ರನ್ನು ಆಯ್ಕೆ 11ರ ಬಳಗಕ್ಕೆ ಸೇರಿಸಿಕೊಂಡಿದೆ.