ನವದೆಹಲಿ:ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುವುದು ಬಹುತೇಕ ಖಚಿತಗೊಂಡಿದ್ದು, ಇದೇ ವಿಷಯವಾಗಿ ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಖಾಸಗಿ ಸುದ್ದಿವಾಹಿನಿವೊಂದಕ್ಕೆ ಮಹತ್ವದ ಮಾಹಿತಿ ನೀಡಿದ್ದಾರೆ.
ನವೆಂಬರ್-ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಟಿ-20 ವಿಶ್ವಕಪ್ ಟೂರ್ನಮೆಂಟ್ ಮುಂದೂಡಿಕೆಯಾಗಿದ್ದು, ಹೀಗಾಗಿ ಇದೇ ತಿಂಗಳಲ್ಲಿ ವಿದೇಶದಲ್ಲಿ ಐಪಿಎಲ್ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ದುಬೈನಲ್ಲಿ ಪ್ರಸಕ್ತ ಸಾಲಿನ ಐಪಿಎಲ್ ನಡೆಸಲು ಈಗಾಗಲೇ ಬಹುತೇಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬ್ರಿಜೇಶ್ ಪಟೇಲ್ ತಿಳಿಸಿದ್ದಾರೆ.