ನವದೆಹಲಿ :ವಾಂಖಡೆ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಕ್ಕೆ ಇನ್ನು 7 ದಿನಗಳಿವೆ. ಆದರೆ, ಆಲ್ರೌಂಡರ್ ಅಕ್ಷರ್ ಪಟೇಲ್ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಡೆಲ್ಲಿ ತಂಡಕ್ಕೆ ಆಘಾತ ತಂದಿದೆ.
ದುರಾದೃಷ್ಟವಶಾತ್ ಅಕ್ಷರ್ ಪಟೇಲ್ಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅವರು ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದು, ಐಸೋಲೇಟ್ ಆಗಿದ್ದಾರೆ ಎಂದು ಡಿಸಿ ಅಧಿಕಾರಿಯೊಬ್ಬರು ಎಎನ್ಐಗೆ ಸ್ಪಷ್ಟಪಡಿಸಿದ್ದಾರೆ.
ಅಕ್ಷರ್ಗೂ ಮೊದಲು ಕೋಲ್ಕತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ಮನ್ ನಿತೀಶ್ ರಾಣಾಗೂ ಮಾರ್ಚ್ 22ರಂದು ಕೋವಿಡ್-19 ಸೋಂಕು ತಗುಲಿತ್ತು. ಐಸೋಲೇಸನ್ ನಂತರ ಗುರವಾರ ನಡೆಸಿದ ಮತ್ತೊಂದು ಟೆಸ್ಟ್ನಲ್ಲಿ ನೆಗೆಟಿವ್ ಪಡೆದಿದ್ದರು.