ದುಬೈ: 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐಪಿಎಲ್ ಫೈನಲ್ ನಡೆಯಲಿದೆ.
ಟೂರ್ನಿಯಲ್ಲಿ ಅಗ್ರ 2 ಸ್ಥಾನ ಪಡೆದಿದ್ದ ತಂಡಗಳೇ ಇಂದಿನ ಪ್ರಶಸ್ತಿ ಸುತ್ತಿನಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಈ ಪಂದ್ಯದಲ್ಲಿ ಮುಂಬೈ ರಾಹುಲ್ ಚಹಾರ್ ಬದಲಿಗೆ ಜಯಂತ್ ಯಾದವ್ಗೆ ಅವಕಾಶ ನೀಡಿದೆ . ಇತ್ತ ಡೆಲ್ಲಿ ತಂಡ ಯಾವುದೆ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ.
ಈ ಎರಡು ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ 27 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ 15 ಬಾರಿ ಗೆದ್ದು ಮುನ್ನಡೆಯಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಟೂರ್ನಿಯಲ್ಲಿ ಈವರೆಗೆ ಮೂರು ಬಾರಿ ಡೆಲ್ಲಿ ಮುಂಬೈ ತಂಡಗಳು ಮುಖಾಮುಖಿಯಾಗಿದ್ದು ಮೂರು ಪಂದ್ಯದಲ್ಲೂ ಮುಂಬೈ ಗೆಲುವು ಸಾಧಿಸಿದೆ.
ಮುಂಬೈ ಇಂಡಿಯನ್ಸ್ : ಕ್ವಿಂಟನ್ ಡಿ ಕಾಕ್ (ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಡೆಲ್ಲಿ ಕ್ಯಾಪಿಟಲ್ಸ್ : ಮಾರ್ಕಸ್ ಸ್ಟೋಯ್ನಿಸ್, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಾಸ್ ಅಯ್ಯರ್ (ನಾಯಕ), ಶಿಮ್ರಾನ್ ಹೆಟ್ಮೈರ್, ರಿಷಭ್ ಪಂತ್ (ಕೀಪರ್), ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಪ್ರವೀಣ್ ದುಬೆ, ಅನ್ರಿಚ್ ನೋಕಿಯಾ