ದುಬೈ:ಐರ್ಲೆಂಡ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಪಾಲ್ ಸ್ಟರ್ಲಿಂಗ್ 2019ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ರನ್ ಪೇರಿಸಿದ ಬ್ಯಾಟ್ಸ್ಮನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬಲಿಷ್ಠ ತಂಡಗಳ ಬ್ಯಾಟ್ಸ್ಮನ್ಗಳೇ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆದರೆ ಕ್ರಿಕೆಟ್ನಲ್ಲಿ ಈಗಷ್ಟೇ ಬೆಳೆಯುತ್ತಿರುವ ಐರ್ಲೆಂಡ್, ನೇಪಾಳ ನೆದರ್ಲೆಂಡ್ನತಹ ರಾಷ್ಟ್ರಗಳು ಈ ಬಾರಿ ಹೆಚ್ಚು ಟಿ20 ಪಂದ್ಯಗಳಲ್ಲಿ ಭಾಗಿಯಾಗಿದ್ದು ಬಹುಪಾಲು ಟಿ20 ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದೆ.
2019ರಲ್ಲಿ ಐರ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಪಾಳ್ ಸ್ಟರ್ಲಿಂಗ್ 20 ಪಂದ್ಯಗಳಿಂದ 41.55 ಸರಾಸರಿಯಲ್ಲಿ 748ರನ್ಗಳಿಸುವ ಮೂಲಕ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಐರ್ಲೆಂಡ್ನ ಕೆವಿನ್ ಒಬ್ರಿಯಾನ್ 729 ರನ್ಗಳಿಸಿರುವ 2ನೇ ಸ್ಥಾನ ಪಡೆದುಕೊಂಡಿದ್ದಾರೆ.