ಕರ್ನಾಟಕ

karnataka

ETV Bharat / sports

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ದೆಹಲಿ ತಂಡದಲ್ಲಿ ಸ್ಥಾನ ಪಡೆದ ಧವನ್, ಇಶಾಂತ್ ಶರ್ಮಾ - :ದೆಹಲಿ ತಂಡದಲ್ಲಿ ಸ್ಥಾನ ಪಡೆದ ಧವನ್

ಗಾಯದಿಂದಾಗಿ ಆಸೀಸ್ ವಿರುದ್ಧದ ಸರಣಿಯಿಂದ ವಂಚಿತರಾಗಿದ್ದ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

Delhi's Syed Mushtaq Ali Trophy squad
ಸೈಯದ್ ಮುಷ್ತಾಕ್ ಅಲಿ ಟ್ರೋಫಿ

By

Published : Dec 26, 2020, 10:27 PM IST

ನವದೆಹಲಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ದೆಹಲಿ ತಂಡವನ್ನು ಘೋಷಣೆ ಮಾಡಲಾಗಿದ್ದು, ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ನೇತೃತ್ವದ ತಂಡದಲ್ಲಿ ಸ್ಥಾನ ಪಡೆದಿರುವ ಭಾರತದ ವೇಗಿ ಇಶಾಂತ್ ಶರ್ಮಾ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಐಪಿಎಲ್ ಸಮಯದಲ್ಲಿ ಆಗಿದ್ದ ಗಾಯದಿಂದಾಗಿ ಇಶಾಂತ್ ಶರ್ಮಾ ಆಸ್ಟ್ರೇಲಿಯಾ ಪ್ರವಾಸದಿಂದ ವಂಚಿತರಾಗಿದ್ದರು. ಎಲ್ಲಾ ಪಂದ್ಯಗಳಿಗೆ ಇಶಾಂತ್ ಲಭ್ಯವಿರುವುದಿಲ್ಲ ಎಂದು ತಿಳಿದು ಬಂದಿದೆ. ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ ಕಾಣಿಸಿಕೊಂಡಿದ್ದ ಧವನ್, ಎರಡನೇ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.

ಆಯ್ಕೆ ಸಮಿತಿ 42 ಸದಸ್ಯರ ಜಂಬೋ ತಂಡವನ್ನು ಹೆಸರಿಸಿದ್ದು, ಇದರಲ್ಲಿ ಅಂಡರ್-19 ವಿಶ್ವಕಪ್ ವಿಜೇತ ನಾಯಕ ಉನ್ಮುಕ್ತ್​ ಚಂದ್, ನಿತೀಶ್ ರಾಣಾ, ಪವನ್ ಸುಯಾಲ್ ಮತ್ತು ಮನನ್ ಶರ್ಮಾ ಕೂಡ ಸ್ಥಾನ ಪಡೆದಿದ್ದಾರೆ.

ತಂಡವನ್ನು ಆಯ್ಕೆ ಮಾಡಲು ಶುಕ್ರವಾರ ಸಭೆ ಸೇರಿದ್ದ ಆಯ್ಕೆ ಸಮಿತಿ, ಮುಖ್ಯ ಕೋಚ್ ರಾಜ್‌ಕುಮಾರ್ ಶರ್ಮಾ ಮತ್ತು ತರಬೇತುದಾರ ಗುರ್​ಶರಣ್ ಸಿಂಗ್ ಅವರ ಬಳಿ ವರದಿ ಮಾಡಿಕೊಳ್ಳುವಂತೆ ಎಲ್ಲಾ ಆಟಗಾರರಿಗೆ ತಿಳಿಸಿದೆ.

ABOUT THE AUTHOR

...view details