ನವದೆಹಲಿ:ಟೀಂ ಇಂಡಿಯಾದಲ್ಲಿ ಅನೇಕ ಸ್ಟಾರ್ ಪ್ಲೇಯರ್ಸ್ಗಳಿದ್ದಾರೆ. ಎಂಎಸ್ ಧೋನಿ,ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿರಂತಹ ಆಟಗಾರರಿದ್ದು, ತಂಡ ಈ ಹಿಂದಿನಗಿಂತಲೂ ಬಲಿಷ್ಠವಾಗಿದೆ.
ಇದರ ಮಧ್ಯೆ ತಂಡಕ್ಕೆ ಕಳೆದ ಕೆಲ ವರ್ಷಗಳಿಂದ ಬೌಲಿಂಗ್ ವಿಭಾಗದ ಆಧಾರಸ್ತಂಭವಾಗಿರುವ ಬೌಲರ್ ಬಗ್ಗೆ ಮಾಜಿ ಆಟಗಾರ ಇರ್ಫಾನ್ ಪಠಾಣ್ ಹಾಡಿ ಹೊಗಳಿದ್ದಾರೆ. ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಮುಕ್ತಾಯಗೊಂಡ ಕ್ರಿಕೆಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಬಗ್ಗೆ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಮೆಚ್ಚುಗೆ ಮಾತಗಳನ್ನಾಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಸೇರಿದಂತೆ ಒಟ್ಟು 13 ವಿಕೆಟ್ ಕಿತ್ತಿರುವ ಜಸ್ಪ್ರೀತ್ ಬುಮ್ರಾ ಬಗ್ಗೆ ಪಠಾಣ್ ಮೆಚ್ಚುಗೆ ಮಾತುಗಳನ್ನಾಡಿದ್ದು, ಟೀಂ ಇಂಡಿಯಾ ಕ್ರಿಕೆಟ್ನ ಅವಿಭಾಜ್ಯ ಅಂಗವಾಗಿರುವ ಬುಮ್ರಾ, ಒಂದು ವೇಳೆ ಕ್ರಿಕೆಟ್ ಆಡದಿದ್ದರೆ ತಂಡಕ್ಕೆ ತುಂಬಲಾರದ ನಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ಇಂತಹ ಆಟಗಾರನನ್ನ ಟೀಂ ಇಂಡಿಯಾ ಪಡೆದುಕೊಂಡಿರುವುದು ನಿಜಕ್ಕೂ ಪುಣ್ಯ ಎಂದು ಅವರು ಹೇಳಿದ್ದಾರೆ.
ಓರ್ವ ಬೌಲರ್ ಮೂರು ಮಾದರಿ ಕ್ರಿಕೆಟ್ನಲ್ಲಿ ಯಶಸ್ಸು ಪಡೆದುಕೊಳ್ಳುವುದು ತುಂಬಾ ಕಡಿಮೆ. ಆದರೆ ಜಸ್ಪ್ರೀತ್ ಬುಮ್ರಾ ಎಲ್ಲ ಮಾದರಿ ಕ್ರಿಕೆಟ್ನಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿದ್ದು,ಅವರ ಸಾಧನೆ ಎಲ್ಲರಿಗೂ ಮಾದರಿ ಎಂದು ಹೇಳಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಪಡೆದುಕೊಂಡಿರುವುದಕ್ಕೂ ಇರ್ಫಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೆಲ ಬೌಲರ್ ಹ್ಯಾಟ್ರಿಕ್ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಈ ಪ್ಲೇಯರ್ ಆ ಸಾಧನೆ ಸಹ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.