ನವದೆಹಲಿ:ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಕಾರ್ಯದರ್ಶಿಯಾಗಿರುವ ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ)ಯ ನೂತನ ಅಧ್ಯಕ್ಷರಾಗಿ ಶನಿವಾರ ನೇಮಕಗೊಂಡಿದ್ದಾರೆ.
ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಈ ವಿಷಯವನ್ನು ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಏಷ್ಯನ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ, ನಿಮ್ಮ ನಾಯಕತ್ವದಲ್ಲಿ ಎಸಿಸಿ ಇನ್ನೂ ಎತ್ತರಕ್ಕೇರಲಿದೆ ಎಂಬ ಭರವಸೆಯಿದೆ. ಸಂಪೂರ್ಣ ಏಷ್ಯಾದ ಕ್ರಿಕೆಟಿಗರು ಇದರ ಅನುಕೂಲ ಪಡೆದುಕೊಳ್ಳಲಿದ್ದಾರೆ. ಹೊಸ ಸಾಹಸ ಯಶಸ್ವಿಯಾಗಲಿ ಎಂದು ಅವರು ಶುಭ ಕೋರಿದ್ದಾರೆ.