ಮೆಲ್ಬೋರ್ನ್(ಆಸ್ಟ್ರೇಲಿಯಾ): ಐಸಿಸಿ ಮಹಿಳಾ ಟಿ-20 ವಿಶ್ವಕಪ್ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರೋಚಕ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಮಹಿಳಾ ಪಡೆ ಮೊದಲ ತಂಡವಾಗಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.
ಸೆಕ್ಯುರಿಟಿ ಗಾರ್ಡ್ ಜತೆ ಬಾಲಿವುಡ್ ಸಾಂಗ್ಗೆ ಜೆಮೈಮಾ ಸಖತ್ ಸ್ಟೆಪ್- ವಿಡಿಯೋ - ಟೀಂ ಇಂಡಿಯಾ ಮಹಿಳಾ ಪಡೆ
ಟೀಂ ಇಂಡಿಯಾ ಮಹಿಳಾ ತಂಡದ ಸ್ಫೋಟಕ ಆಟಗಾರ್ತಿ ಜೆಮೈಮಾ ರಾಡ್ರಿಗಸ್ ಸೆಕ್ಯುರಿಟಿ ಗಾರ್ಡ್ ಜತೆ ಸಖತ್ ಆಗಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಇಂದಿನ ಪಂದ್ಯದಲ್ಲಿ 4ರನ್ಗಳ ರೋಚಕ ಗೆಲುವು ದಾಖಲಿಸಿರುವ ಇಂಡಿಯಾ ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ. ಈ ಮಧ್ಯೆ ತಂಡದ ಸ್ಫೋಟಕ ಆಟಗಾರ್ತಿ ಜೆಮೈಮಾ ರಾಡ್ರಿಗಸ್ ಸಖತ್ ಹೆಜ್ಜೆ ಹಾಕಿದ್ದಾರೆ.
ತಾವು ಉಳಿದುಕೊಂಡಿರುವ ಹೊಟೇಲ್ನ ಮಹಿಳಾ ಸೆಕ್ಯುರಿಟಿ ಗಾರ್ಡ್ ಜತೆ ಜೆಮೈಮಾ ರಾಡ್ರಿಗಸ್ ಬಾಲಿವುಡ್ ಸಾಂಗ್ವೊಂದಕ್ಕೆ ಭರ್ಜರಿಯಾಗಿ ಹೆಜ್ಜೆ ಹಾಕಿದ್ದು, ಈ ವಿಡಿಯೋ ತುಣುಕವೊಂದನ್ನ ಐಸಿಸಿ ತನ್ನ ಟ್ವಿಟ್ಟರ್ ಅಕೌಂಟ್ನಲ್ಲಿ ಶೇರ್ ಮಾಡಿದೆ. ಹಾಲಿ ಚಾಂಪಿಯನ್ ಅಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಜೆಮೈಮಾ ರಾಡ್ರಿಗಸ್ ಕೇವಲ 26 ಎಸೆತಗಳಲ್ಲಿ 33ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಐಸಿಸಿ ಟಿ-20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಆಡಿರುವ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ.