ದುಬೈ:ಇಂಡಿಯನ್ ಪ್ರೀಮಿಯರ್ ಲೀಗ್ ಸೆಪ್ಟೆಂಬರ್ 19ರಿಂದ ಆರಂಭಗೊಳ್ಳಲಿದ್ದು, ಅದಕ್ಕಾಗಿ ಎಲ್ಲ ತಂಡಗಳು ಭರ್ಜರಿ ತಯಾರಿಯಲ್ಲಿ ಮಗ್ನವಾಗಿವೆ. ಎಲ್ಲ ಪ್ರಾಂಚೈಸಿಗಳ ಪ್ಲೇಯರ್ಸ್ ಬ್ಯಾಟಿಂಗ್, ಕ್ಷೇತ್ರ ರಕ್ಷಣೆ ಹಾಗೂ ಬೌಲಿಂಗ್ನತ್ತ ಹೆಚ್ಚಿನ ಗಮನ ಹರಿಸುತ್ತಿದ್ದು, ಇವರಿಗೆ ಕೋಚ್ಗಳು ಸಖತ್ ಆಗಿ ತರಬೇತಿ ನೀಡುತ್ತಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ ಅಭ್ಯಾಸದ ವೇಳೆ ಬ್ಯಾಟಿಂಗ್ ಹಾಗೂ ಅದ್ಭುತ ಕ್ಷೇತ್ರರಕ್ಷಣೆ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಅಭ್ಯಾಸದ ವೇಳೆ ಒಂದೇ ಕೈಯಲ್ಲಿ ಚುರುಕಿನ ಕ್ಯಾಚ್ ಹಿಡಿದು ಎಲ್ಲರ ಗಮನ ಸೆಳೆದಿದ್ದಾರೆ.