ಇಂದೋರ್:ಮಯಾಂಕ್ ದ್ವಿಶತಕ ಹಾಗೂ ಭಾರತೀಯ ಬೌಲರ್ಗಳ ಪ್ರಚಂಡ ಬೌಲಿಂಗ್ ದಾಳಿಯ ನೆರವಿನಿಂದ ಬಾಂಗ್ಲಾದೇಶದ ವಿರುದ್ಧ ಇನ್ನಿಂಗ್ಸ್ ಹಾಗೂ 130 ರನ್ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ನಲ್ಲಿ 150 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಭಾರತ ತಂಡ ಮಯಾಂಕ್(243) ಅವರ ದ್ವಿಶತಕದ ನೆರವಿನಿಂದ 6 ವಿಕೆಟ್ ಕಳೆದುಕೊಂಡು 493ಕ್ಕೆ ಡಿಕ್ಲೇರ್ ಘೋಷಿಸಿತ್ತು. ಅಬು ಜಾಯೇದ್ 4 ವಿಕೆಟ್ ಪಡೆದು ಬಾಂಗ್ಲಾದೇಶದ ಯಶಸ್ವಿ ಬೌಲರ್ ಎನಿಸಿಕೊಂಡರು.
343 ರನ್ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ 69.2 ಓವರ್ಗಳಲ್ಲಿ 213 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಇನ್ನಿಂಗ್ಸ್ ಹಾಗೂ 130 ರನ್ಗಳ ಸೋಲನುಭವಿಸಿತು.