ದುಬೈ:ದಕ್ಷಿಣ ಆಫ್ರಿಕಾ ಆಲ್ರೌಂಡರ್, ಆಸ್ಟ್ರೇಲಿಯಾ ಮಹಿಳಾ ತಂಡದ ಮಾಜಿ ನಾಯಕಿ ಲಿಸಾ ಸ್ಥಲೇಕರ್ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಹೀರ್ ಅಬ್ಬಾಸ್ 2020ರ ಐಸಿಸಿ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.
ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಕಾಲೀಸ್ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ 10 ಸಾವಿರ ರನ್ ಹಾಗೂ 250ಕ್ಕೂ ಹೆಚ್ಚು ವಿಕೆಟ್ ಪಡೆದ ವಿಶ್ವದ ಏಕೈಕ ಕ್ರಿಕೆಟಿಗರಾಗಿದ್ದಾರೆ. ಕಾಲೀಸ್ 18 ವರ್ಷದ ವೃತ್ತಿ ಜೀವನದಲ್ಲಿ 2 ಮಾದರಿಯ ಕ್ರಿಕೆಟ್ನಿಂದ 25 ಸಾವಿರಕ್ಕೂ ಹಾಗೂ 600ಕ್ಕೂ ಹೆಚ್ಚುಪಡೆದಿದ್ದಾರೆ.
ಆಸ್ಟ್ರೇಲಿಯಾ ಲಿಸಾ ಸ್ಥಲೇಕರ್ ಆಸ್ಟ್ರೇಲಿಯಾ ತಂಡದ 2 ಏಕದಿನ ವಿಶ್ವಕಪ್(2005 ಮತ್ತು 2013) ಹಾಗೂ 2 ಟಿ20 ವಿಶ್ವಕಪ್(2010 ಮತ್ತು 2012) ತಂಡದಲ್ಲಿ ಆಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ 100 ರನ್ ಹಾಗೂ 100 ವಿಕೆಟ್ ಪಡೆದ ಮೊದಲ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. 2001ರಲ್ಲಿ ಪದಾರ್ಪಣೆ ಮಾಡಿದ್ದ ಅವರು 2013 ರಲ್ಲಿ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದರು. ಒಟ್ಟಾರೆ 187 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಅವರು 4000 ರನ್ ಹಾಗೂ 200ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. ಅವರು 934 ದಿನಗಳಕಾಲ ಆಲ್ರೌಂಡರ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದರು.