ನವದೆಹಲಿ:ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ಬಗ್ಗೆ ಕೇನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇನ್ ವಿಲಿಯಮ್ಸನ್ ಅವರ ಪತ್ನಿ ಸಾರಾ ರಹೀಮ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವನ್ನು ಅಪ್ಪಿಕೊಂಡಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ಕೇನ್ ವಿಲಿಯಮ್ಸನ್, ಸುಂದರವಾರ ಹೆಣ್ಣು ಮಗುವನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಅತ್ಯಂತ ಸಂಭ್ರಮವಾಗುತ್ತಿದೆ" ಎಂದಿದ್ದಾರೆ.