ನವದೆಹಲಿ :ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಹಾಗೂ ಕೋಚ್ ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಡಿಸ್ಚಾರ್ಜ್ ಆಗಿದ್ದಾರೆ..
ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಳೆದ ರಾತ್ರಿ ಕಪಿಲ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿತ್ತು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಎಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು, ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.
Last Updated : Oct 25, 2020, 3:32 PM IST