ಬೆಂಗಳೂರು:ರೈಲ್ವೇಸ್ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಗೆಲುವಿನ ಕೇಕೆ ಹಾಕಿದೆ. 10 ವಿಕೆಟ್ಗಳ ಭರ್ಜರಿ ಗೆಲುವು ದಾಖಲು ಮಾಡುವ ಮೂಲಕ ಕ್ವಾರ್ಟರ್ ಫೈನಲ್ಗೆ ಲಗ್ಗೆ ಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರೈಲ್ವೇಸ್ ತಂಡ ಆರಂಭಿಕ ಆಘಾತದ ನಡುವೆ ಕೂಡ ಪ್ರಥಮ್ ಸಿಂಗ್ (129), ಅರಿಂದಮ್ ಘೋಷ್ (36) ರನ್ಗಳ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 284 ರನ್ ಗಳಿಕೆ ಮಾಡಿತು.
ಕರ್ನಾಟಕ ತಂಡದ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಗೋಪಾಲ್ 3 ವಿಕೆಟ್ ಪಡೆದುಕೊಂಡು ಮಿಂಚಿದ್ರೆ, ಸುಚಿತ್ 2, ಮಿಥುನ್, ಪ್ರಸಿದ್ದ್, ವೈಶಾಕ್ ತಲಾ 1 ವಿಕೆಟ್ ಪಡೆದುಕೊಂಡರು.
284 ರನ್ಗಳ ಗುರಿ ಬೆನ್ನತ್ತಿದ್ದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಸಮರ್ಥ್, ಅಜೇಯ (130), ದೇವದತ್ ಪಡಿಕ್ಕಲ್, ಅಜೇಯ (145) ರನ್ಗಳಿಕೆ ಮಾಡಿ ಕೇವಲ 40.3 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 285 ರನ್ಗಳಿಕೆ ಮಾಡಿದ್ದು, ಕ್ವಾರ್ಟರ್ ಫೈನಲ್ಗೆ ಲಗ್ಗೆ ಹಾಕಿದೆ.
ಈ ಹಿಂದಿನ ಪಂದ್ಯದಲ್ಲೂ ಯುವ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಅಬ್ಬರದ ಶತಕ ಸಿಡಿಸಿ ಕೇರಳ ವಿರುದ್ಧದ ಪಂದ್ಯದಲ್ಲಿ 9 ವಿಕೆಟ್ಗಳ ಜಯ ಸಾಧಿಸಿತ್ತು. ಇದೀಗ ರೈಲ್ವೇಸ್ ವಿರುದ್ಧ 10 ವಿಕೆಟ್ಗಳ ಗೆಲುವು ದಾಖಲು ಮಾಡಿದೆ.