ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವಾ ಅಮಿತ್ ಶಾ ಇಂದು ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು ಅದಕ್ಕೆ ಕ್ರಿಕೆಟಿಗ ಗಂಭೀರ್ ಸೇರಿದಂತೆ ಹಲವು ಕ್ರಿಕೆಟಿಗರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ ರಾಜ್ಯಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ 370ರ ವಿಧಿಯಡಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದಾಗಿ ಅಮಿತ್ ಶಾ ತಿಳಿಸಿದ್ದರು. ಈ ಮಹತ್ವದ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಗಂಭಿರ್ ಟ್ವೀಟ್ ಮಾಡಿದ್ದು, " ಯಾರೂ ಮಾಡದನ್ನು ನಾವು ಮಾಡಿ ತೋರಿಸಿದ್ದೇವೆ, ಕಾಶ್ಮೀರದಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.