ಯಾರ್ಕ್:ಭಾರತದ ಯುವ ಆಟಗಾರ್ತಿ ಜೆಮೈಮಾ ರಾಡ್ರಿಗಸ್ ಕಿಯಾ ಮಹಿಳಾ ಸೂಪರ್ ಲೀಗ್ನಲ್ಲಿ ಭರ್ಜರಿ ಶತಕಗಳಿಸುವ ಮೂಲಕ ಏಕಾಂಗಿಯಾಗಿ ಹೋರಾಡಿ ತಮ್ಮ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.
ಭಾನುವಾರ ನಡೆದ ಸೌಥರ್ನ್ ವಿಪರ್ಸ್ ವಿರುದ್ಧ 51 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಟಿ20 ಲೀಗ್ನಲ್ಲಿ ವೇಗದ ಶತಕ ಬಾರಿಸಿದ ಆಟಗಾರ್ತಿ ಎನಿಸಿದರು. ಅಲ್ಲದೆ ಔಟಾಗದೆ 112 ರನ್ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 18 ವರ್ಷದ ಜೆಮೈಮಾ ಇನ್ನಿಂಗ್ಸ್ನಲ್ಲಿ 17 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿತ್ತು. ಇದಲ್ಲದೆ ಜೆಮೈಮಾ 112 ರನ್ಗಳಿಸುವ ಮೂಲಕ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ವೈಯಕ್ತಿಕ ಹೆಚ್ಚು ರನ್ಗಳಿಸಿದ ಶ್ರೇಯಕ್ಕೆ ಪಾತ್ರರಾದರು.