ಬೆಂಗಳೂರು: ಭಾರತದ ಅತ್ಯಂತ ನಂಭಿಕಸ್ಥ ಆಟಗಾರ, ಯಾವುದೇ ಕ್ರಮಾಂಕ, ಯಾವುದೇ ಜವಾಬ್ದಾರಿ ಕೊಟ್ಟರೂ ಯಶಸ್ವಿಯಾಗಿ ನಿರ್ವಹಿಸುತ್ತಿರುವ ಹೆಮ್ಮೆಯ ಕನ್ನಡಿಗ ಕೆ ಎಲ್ ರಾಹುಲ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
1992 ಏಪ್ರಿಲ್ಲ್ಲಿ ಮಂಗಳೂರಿನಲ್ಲಿ ಜನಿಸಿದ್ದ ರಾಹುಲ್, ಮೊದಲು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೆಸ್ಟ್ ಬ್ಯಾಟ್ಸ್ಮನ್ ಆಗಿದ್ದರು. ಪ್ರಸ್ತುತ ಭಾರತ ತಂಡದ ಯಶಸ್ವಿ ಬ್ಯಾಟ್ಸ್ಮನ್ ಆಗಿ ಮಿಂಚುತ್ತಿದ್ದಾರೆ. ವಿಕೆಟ್ ಕೀಪರ್, ಬ್ಯಾಟ್ಸ್ಮನ್ ಆಗಿ ಯಶಸ್ವಿ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ ರಾಹುಲ್.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ರಾಹುಲ್ ಅದೇ ಸರಣಿಯಲ್ಲಿ ಶತಕ ಸಿಡಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು. ಜಿಂಬಾಂಬ್ವೆ ವಿರುದ್ಧ ನಂತರ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.
ಕೆ ಎಲ್ ರಾಹುಲ್ 36 ಟೆಸ್ಟ್ ಪಂದ್ಯಗಳಲ್ಲಿ 2006 ರನ್, 32 ಏಕದಿನ ಪಂದ್ಯಗಳಲ್ಲಿ 1239 ರನ್ ಹಾಗೂ 41 ಟಿ20 ಪಂದ್ಯಗಳಿಂದ 1461 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 4 ಶತಕ, ಟೆಸ್ಟ್ನ್ನಲ್ಲಿ 5 ಶತಕ ಹಾಗೂ ಟಿ20ಯಲ್ಲಿ 2 ಶತಕ ಸಿಡಿಸಿದ್ದಾರೆ.
ರಾಹುಲ್ ಕುರಿತು ಕೆಲವು ಆಸಕ್ತಿಕರ ಸಂಗತಿಗಳು
- ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಪಂದ್ಯದಲ್ಲೇ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು.
- ಚಿಕ್ಕಂದಿನಿಂದಲೂ ಭಾರತದ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಆಟವನ್ನು ನೋಡಿಕೊಂಡೇ ಬೆಳೆದವರು ರಾಹುಲ್.
- ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಮೊದಲ ಆರಂಭಿಕನಾಗಿ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
- ಮೂರು ಮಾದರಿಯ ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಭಾರತದ 3ನೇ ಆಟಗಾರ ಎನಿಸಿಕೊಂಡಿದ್ದಾರೆ.
- ಮೂರು ಮಾದರಿಯ ಕ್ರಿಕೆಟ್ನಲ್ಲಿ ವೇಗವಾಗಿ ಶತಕ ಸಿಡಿಸಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಇವರು 20 ಇನ್ನಿಂಗ್ಸ್ಗಳಲ್ಲಿ ಈ ದಾಖಲೆ ಮಾಡಿದ್ದಾರೆ.
- ಐಪಿಎಲ್ನಲ್ಲಿ ವೇಗವಾಗಿ ಅರ್ಧಶತಕ ಸಿಡಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ.