ಕರ್ನಾಟಕ

karnataka

ETV Bharat / sports

ರಾಹುಲ್​ಗೆ ಡಬಲ್ ಧಮಾಕ: ಟೆಸ್ಟ್​ ತಂಡಕ್ಕೆ ಕಮ್​ಬ್ಯಾಕ್ ಜೊತೆಗೆ ಉಪನಾಯಕನ ಪಟ್ಟ

ಕೆ.ಎಲ್.​ ರಾಹುಲ್ 2019ರಲ್ಲಿ ಕೊನೆಯ ಬಾರಿ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರಿಂದ ಭಾರತದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್​ ವಿರುದ್ಧದ ವಿದೇಶಿ ಟೆಸ್ಟ್​ ಸರಣಿಯಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದರು.

ಕೆಎಲ್ ರಾಹುಲ್
ಕೆಎಲ್ ರಾಹುಲ್

By

Published : Oct 26, 2020, 10:24 PM IST

ಮುಂಬೈ: ಐಪಿಎಲ್​ನಲ್ಲಿ ರನ್​ಗಳ ಹೊಳೆಯನ್ನೇ ಹರಿಸುತ್ತಿರುವ ಕರ್ನಾಟಕದ ಗಂಡುಗಲಿ , ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಒಂದು ವರ್ಷದ ನಂತರ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ವಿಶೇಷವೆಂದರೆ ಏಕದಿನ ಮತ್ತು ಟಿ-20 ತಂಡಕ್ಕೆ ಕೊಹ್ಲಿ ನೇತೃತ್ವದ ತಂಡಕ್ಕೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಕೆಎಲ್​ ರಾಹುಲ್ 2019ರಲ್ಲಿ ಕೊನೆಯ ಬಾರಿ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರಿಂದ ಭಾರತದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್​ ವಿರುದ್ಧದ ವಿದೇಶಿ ಟೆಸ್ಟ್​ ಸರಣಿಯಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದರು.

ಆದರೆ, ಕಳೆದ ಒಂದು ವರ್ಷದಿಂದ ಅವರ ಸೀಮಿತ ಓವರ್​ಗಳ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ಹಾಗೂ ಐಪಿಎಲ್​ನಲ್ಲಿ ಟಾಪ್ ರನ್​ ಸ್ಕೋರರ್​ ಆಗಿರುವುದರಿಂದ ರಾಹುಲ್​ಗೆ ಬಿಸಿಸಿಐ ಆಯ್ಕೆ ಸಮಿತಿ ಮಣೆ ಹಾಕಿದೆ. ರೋಹಿತ್ ಗಾಯಾಳುವಾಗಿರುವುದರಿಂದ ರಾಹುಲ್ ಆಯ್ಕೆ ಬಿಸಿಸಿಐಗೆ ಅನಿವಾರ್ಯ ಕೂಡ ಆಗಿತ್ತು.

ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ಶುಬ್ಮನ್ ಗಿಲ್, ಅಜಿಂಕ್ಯಾ ರಹಾನೆ(ಉಪ ನಾಯಕ), ಹನುಮ ವಿಹಾರಿ,ವೃದ್ಧಿಮಾನ್ ಸಹಾ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್

ಏಕದಿನ ತಂಡ:ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್​,ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ,ಹಾರ್ದಿಕ್ ಪಾಂಡ್ಯ, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಶಾರ್ದುಲ್ ಠಾಕೂರ್

ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸಾಮ್ಸನ್(ವಿಕೀ), ರವೀಂದ್ರ ಜಡೇಜಾ,ವಾಷಿಂಗ್ಟನ್ ಸುಂದರ್​,ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ದೀಪಕ್ ಚಹಾರ್, ವರುಣ್ ಚಕ್ರವರ್ತಿ

ABOUT THE AUTHOR

...view details