ಮುಂಬೈ: ಗಾಯದಿಂದ ವಿಂಡೀಸ್ ವಿರುದ್ಧದ ಸೀಮಿತ ಓವರ್ಗಳ ಪಂದ್ಯಗಳಿಂದ ಹೊರಬಿದ್ದಿರುವ ಶಿಖರ್ ಧವನ್ ಜಾಗದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ರನ್ನು ಕಣಕ್ಕಿಳಿಸಿ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಸಲಹೆ ನೀಡಿದ್ದಾರೆ.
ವರ್ಷಾರಂಭದಲ್ಲಿ ಭಾರತ ಆಡುತ್ತಿರುವ ವಿಂಡೀಸ್ ವಿರುದ್ಧದ ಏಕದಿನ ಸರಣಿ ಹಾಗೂ ಟಿ-20 ಸರಣಿಯಿಂದ ಗಾಯದ ಕಾರಣ ಶಿಖರ್ ಧವನ್ ಹೊರಬಿದ್ದಿದ್ದು, ಅವರ ಜಾಗಕ್ಕೆ ಬಿಸಿಸಿಐ ಈಗಾಗಲೇ ಸಂಜು ಸಾಮ್ಸನ್ ಅವರನ್ನು ಆಯ್ಕೆ ಮಾಡಿದೆ.
ಆದರೆ ಧವನ್ ಜಾಗದಲ್ಲಿ ಕೆ.ಎಲ್.ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯಲು ಇದು ಸುಸಮಯ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ಕೊಹ್ಲಿ ಹಾಗೂ ಟೀಂ ಮ್ಯಾನೇಜ್ಮೆಂಟ್ಗೆ ಸಲಹೆ ನೀಡಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ನಲ್ಲಿ ಪ್ರಸಾರವಾಗುವ ಗೇಮ್ ಪ್ಲಾನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಲಕ್ಷ್ಮಣ್, ರಾಹುಲ್ ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಆದರೆ ನಾಯಕ ವಿರಾಟ್ ಕೊಹ್ಲಿ ಸೀಮಿತ ಓವರ್ ಕ್ರಿಕೆಟ್ಗೆ ಮರಳದಿರುವುದರಿಂದ ಈಗಾಗಲೇ ಉತ್ತಮ ಫಾರ್ಮ್ನಲ್ಲಿರುವ ರಾಹುಲ್, ಧವನ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಬೇಕು. ನನ್ನ ಪ್ರಕಾರ ರಾಹುಲ್ ವಿಂಡೀಸ್ ವಿರುದ್ಧ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ವಿವಿಎಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.