ಬೆಂಗಳೂರು: ಟೀಂ ಇಂಡಿಯಾದ ಉಪ ನಾಯಕ ಕೆಎಲ್ ರಾಹುಲ್ ಸೇರಿದಂತೆ ವಿವಿಧ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ್ದು, ಇದಕ್ಕೆ ಟ್ವೀಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ.
ಮತ್ತೊಮ್ಮೆ ಧನ್ಯವಾದಗಳು ಎಂದಿರುವ ಕೆಎಲ್ ರಾಹುಲ್, ನನಗೆ ಏಕಲವ್ಯ ಪ್ರಶಸ್ತಿ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ ಪ್ಲೇಯರ್ಸ್, ಸ್ನೇಹಿತರು ಹಾಗೂ ಕುಟುಂಬದ ಸಹಾಯವಿಲ್ಲದೆ ಈ ಸಾಧನೆ ಮಾಡಲು ಅಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಪರಿಶ್ರಮದ ಮೂಲಕ ಆಟವಾಡಿ, ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕ್ಯಾಪ್ಟನ್ ಆಗಿದ್ದು, ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ-20 ಹಾಗೂ ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದು, ಸೀಮಿತ ಓವರ್ಗಳ ಉಪ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕೆಎಲ್ ರಾಹುಲ್ ಜತೆಗೆ ಕನ್ನಡಿಗ ಮಯಾಂಕ್ ಅಗರವಾಲ್ಗೂ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.