ನವದೆಹಲಿ: ಟೆಸ್ಟ್ ಕ್ರಿಕೆಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಕನ್ನಡಿಗ ಕೆ.ಎಲ್.ರಾಹುಲ್ ವೈಫಲ್ಯ ಕಾಣುತ್ತಿದ್ದು, ರಾಹುಲ್ ಬದಲು ರೋಹಿತ್ಗೆ ಅವಕಾಶ ನೀಡಬೇಕು ಎಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿ ನಂತರ ವೆಸ್ಟ್ ಇಂಡೀಸ್ ವಿರುದ್ಧ ನಡೆದ 2 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ಆದರೆ, ತಂಡದ ಓಪನರ್ಸ್ಗಳು ಮಾತ್ರ ಉತ್ತಮ ಪ್ರದರ್ಶನ ನೀಡಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಕೆ.ಎಲ್.ರಾಹುಲ್ ಎರಡೂ ಪಂದ್ಯಗಳಲ್ಲಿ ಬಿಗ್ ಸ್ಕೋರ್ ಕಲೆಹಾಕುವಲ್ಲಿ ವಿಫಲರಾಗಿದ್ದಾರೆ. ರಾಹುಲ್ ಬದಲಿಗೆ ರೋಹಿತ್ ಶರ್ಮಾಗೆ ಅವಕಾಶ ನೀಡಿದರೆ ಉತ್ತಮ ಎಂದು ಗಂಗೂಲಿ ಅಭಿಪ್ರಾಯ ಪಟ್ಟಿದ್ದಾರೆ.