ಅಹ್ಮದಾಬಾದ್: ನಾಯಕ ಕೊಹ್ಲಿ ಸೇರಿದಂತೆ ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮಾ ಮತ್ತು ಅಜಿಂಕ್ಯ ರಹಾನೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ಗೂ ಮುನ್ನ ನೆಟ್ಸ್ನಲ್ಲಿ ಬೆವರು ಹರಿಸಿದ್ದಾರೆ.
ಗುರುವಾರದಿಂದ ಅಹ್ಮದಾಬಾದ್ನಲ್ಲಿ 4ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈಗಾಗಲೆ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶ ಬಹುತೇಕ ಖಚಿತ ಮಾಡಿಕೊಂಡಿರುವ ಭಾರತ ತಂಡ ಕೊನೆಯ ಪಂದ್ಯದಲ್ಲಿ ಡ್ರಾ ಅಥವಾ ಗೆಲುವು ಸಾಧಿಸಬೇಕಿದೆ.
ನಾಯಕ ಕೊಹ್ಲಿ , ಉಪನಾಯಕ ಅಜಿಂಕ್ಯ ರಹಾನೆ ಮತ್ತು ಅನುಭವಿ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ನೆಟ್ಸ್ನಲ್ಲಿ ಸ್ಪಿನ್ ಮತ್ತು ವೇಗದ ಬೌಲರ್ಗಳಿಗೆ ಫುಲ್, ಡ್ರೈವ್ ಮತ್ತು ಫ್ಲಿಕ್ ಮಾಡುತ್ತಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ಗಳಲ್ಲಿ ಟ್ವೀಟ್ ಮಾಡಿಕೊಂಡಿದೆ.