ದುಬೈ :ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟಿಸಿರುವ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೆ (886 ಅಂಕ) ಲಗ್ಗೆ ಇಟ್ಟಿದ್ದು, ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಅಗ್ರ ಹತ್ತರಲ್ಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ದ್ವಿಶತಕ ಬಾರಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದ ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ (877) ಇದೀಗ ಮತ್ತೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ನಂತರದ ಸ್ಥಾನದಲ್ಲಿ ಮಾರ್ನಸ್ ಲಬುಶೇನ್ (827), ಬಾಬರ್ ಅಜಾಮ್ (797), ಡೇವಿಡ್ ವಾರ್ನರ್ (793) ಇದ್ದಾರೆ.
ಆಸ್ಟ್ರೇಲಿಯಾ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲೇ (911) ಮುಂದುವರೆದಿದ್ದಾರೆ. ಚೇತೇಶ್ವರ ಪೂಜಾರ 766 ಪಾಯಿಂಟ್ಗಳೊಂದಿಗೆ ಏಳನೇ ಸ್ಥಾನದಲ್ಲಿದ್ರೆ, ಬೆನ್ಸ್ಟೊಕ್ಸ್ (760), ಜೋ ರೂಟ್ (738) ಮತ್ತು ರಹಾನೆ ಒಂದು ಸ್ಥಾನ ಏರಿಕೆ ಕಾಣುವ ಮೂಲಕ 726 ಅಂಕಗಳೊಂದಿಗೆ ಹತ್ತನೇ ಸ್ಥಾನದಲ್ಲಿದ್ದಾರೆ.