ಅಹಮದಾಬಾದ್:ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದು, ಈ ವೇಳೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶೇಷವಾಗಿ ಸಂಭ್ರಮಿಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೊನ್ನೆ ಸುತ್ತಿ ನಿರಾಸೆ ಅನುಭವಿಸಿದ್ದರು. ಆದ್ರೆ ರಿಷಭ್ ಪಂತ್ ಶತಕದಾಟ ನೋಡಿ ಸಂಭ್ರಮಿಸಿದ್ದಾರೆ. ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತುಕೊಂಡು ಪಂದ್ಯ ವೀಕ್ಷಣೆ ಮಾಡುತ್ತಿದ್ದ ವಿರಾಟ್, ವಿಕೆಟ್ ಕೀಪರ್ ರಿಷಭ್ ಶತಕ ಸಾಧನೆ ಮಾಡುತ್ತಿದ್ದಂತೆ ತಾವು ಕುಳಿತುಕೊಂಡಿದ್ದ ಕುರ್ಚಿಯಿಂದೆದ್ದು ಹೊರಗಡೆ ಬಂದು ಖುಷಿ ಪಟ್ಟರು.