ಕರ್ನಾಟಕ

karnataka

ETV Bharat / sports

ಸೌರವ್​ ಗಂಗೂಲಿಗೆ ಚಿಕಿತ್ಸೆ: ಆಸ್ಪತ್ರೆಗೆ ಸಿಎಂ ಮಮತಾ, ರಾಜ್ಯಪಾಲರ ಭೇಟಿ - ವುಡ್​ಲ್ಯಾಂಡ್ ಆಸ್ಪತ್ರೆಗೆ ಮಮತಾ ಬ್ಯಾನರ್ಜಿ ಭೇಟಿ

ವುಡ್​ಲ್ಯಾಂಡ್ಸ್‌​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ವಿಚಾರಿಸಲು ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದರು.

Woodlands Hospital
Woodlands Hospital

By

Published : Jan 2, 2021, 6:40 PM IST

ಕೋಲ್ಕತ್ತಾ:ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತ್ತಾದ ವುಡ್​ಲ್ಯಾಂಡ್ಸ್‌ ಆಸ್ಪತ್ರೆಯಲ್ಲಿ ಸೌರವ್​ ಗಂಗೂಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಮನೆಯಲ್ಲಿನ ಜಿಮ್​ನಲ್ಲಿದ್ದ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿದೆ.

ಓದಿ: ಆಂಜಿಯೋಪ್ಲಾಸ್ಟಿ ಬಳಿಕ ಪ್ರಜ್ಞೆ ಬಂದಿದ್ದು, ಮಾತನಾಡುತ್ತಿದ್ದಾರೆ: ಗಂಗೂಲಿ ಆರೋಗ್ಯದ ಬಗ್ಗೆ ವೈದ್ಯರ ಹೇಳಿಕೆ​

ಈ ಕುರಿತ ಸುದ್ದಿ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿ ಆಘಾತ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದೀಗ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಗಂಗೂಲಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದಕ್ಕೂ ಮುಂಚಿತವಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್​ ದನ್ಕಾರ್​ ಕೂಡ ಆಸ್ಪತ್ರೆಗೆ ಭೇಟಿ ಗಂಗೂಲಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿರುವ ಅವರು, ನಾನು ಗಂಗೂಲಿ ಜತೆ ಮಾತನಾಡಿದ್ದು, ಅವರು ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಗಂಗೂಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಾ.ಆಫ್ತಾಬ್​ ಖಾನ್​, ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಮುಂದಿನ 24 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದಿದ್ದಾರೆ.

ABOUT THE AUTHOR

...view details