ಬೆಂಗಳೂರು:ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ (ಕೆಪಿಎಲ್) ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಾರೆ ಎಂಬ ಆರೋಪದಡಿ ರಾಜ್ಯದ ಕ್ರಿಕೆಟಿಗರಾದ ಸಿ.ಎಂ.ಗೌತಮ್ ಹಾಗೂ ಅಬ್ರಾರ್ ಖಾಜಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಈ ಇಬ್ಬರು ಆಟಗಾರರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.
2019ರ ಕೆಪಿಎಲ್ ಟೂರ್ನಿಯ ಬಳ್ಳಾರಿ ಟಸ್ಕರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವೆ ನಡೆದಿದ್ದ ಫೈನಲ್ ಪಂದ್ಯದಲ್ಲಿ ಸಿ.ಎಂ. ಗೌತಮ್ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ ಎಂಬ ಆರೋಪದಡಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗುವ ಸೈಯದ್ ಮುಷ್ತಾಕ್ ಅಲಿ ಟಿ-20 ಟ್ರೋಫಿಯಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಕಳೆದುಕೊಂಡಿದ್ದಾರೆ.