ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿದ ಕೃಷ್ಣಪ್ಪ ಗೌತಮ್ ಬೌಲಿಂಗ್ನಲ್ಲೂ ಉತ್ತಮ ಪ್ರದರ್ಶನ ತೋರಿ 4 ಓವರ್ಗಳಲ್ಲಿ 8ವಿಕೆಟ್ ಪಡೆದು ಮಿಂಚಿದ್ದಾರೆ.
ಟಿ-20 ಕ್ರಿಕೆಟ್ನಲ್ಲಿ ಐತಿಹಾಸಿಕ ದಾಖಲೆ ಬರೆದ ಕನ್ನಡಿಗ - ಕೃಷ್ಣಪ್ಪ ಗೌತಮ್
ಟಿ-20 ಕ್ರಿಕೆಟ್ ಇತಿಹಾಸದಲ್ಲೆ ಕನ್ನಡಿಗ ಕೃಷ್ಣಪ್ಪ ಗೌತಮ್ ಹೊಸದೊಂದು ದಾಖಲೆ ಬರೆದಿದ್ದಾರೆ.
ಶಿವಮೊಗ್ಗ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಳ್ಳಾರಿ ಟಸ್ಕರ್ಸ್ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗೌತಮ್, ಶಿವಮೊಗ್ಗ ಲಯನ್ಸ್ ಬೌಲರ್ಗಳನ್ನ ಬೆಂಡೆತ್ತಿ, ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದರು. ಒಟ್ಟು 56 ಎಸೆತಗಳಲ್ಲಿ 13 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 134 ರನ್ ಗಳಿಸಿದರು.
ಬರಿ ಬ್ಯಾಟ್ನಿಂದ ಅಷ್ಟೆ ಅಲ್ಲದೆ ಬೌಲಿಂಗ್ನಲ್ಲೂ ಮಿಂಚಿದ ಗೌತಮ್ 4 ಓವರ್ಗಳಲ್ಲಿ ಕೇವಲ 15ರನ್ ನೀಡಿ 8 ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಟಿ-20 ಪಂದ್ಯವೊಂದರಲ್ಲೆ ಅತಿಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.