ಕರ್ನಾಟಕ

karnataka

ETV Bharat / sports

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ: ಮುಂದುವರಿದ ಚಿಕಿತ್ಸೆ

ಹರಿಯಾಣ ಹರಿಕೇನ್, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

kapil dev
ಕಪಿಲ್ ದೇವ್

By

Published : Oct 23, 2020, 3:25 PM IST

ನವದೆಹಲಿ:ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯಕ್ಕೆ ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನಷ್ಟು ಚೇತರಿಸಿಕೊಳ್ಳಲಿ ಎಂದು ಕಪಿಲ್ ದೇವ್ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹರಿಯಾಣ ಹರಿಕೇನ್ ಎಂದೇ ಹೆಸರುವಾಸಿಯಾಗಿದ್ದ ಕಪಿಲ್​​​ದೇವ್ ಅವರು 1978 ಅಕ್ಟೋಬರ್ 1 ರಂದು ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ಪದಾರ್ಪಣೆ ಮಾಡಿದ್ದರು. ಕ್ರಿಕೆಟ್​​ನಲ್ಲಿ ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್​ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್​ಗಳನ್ನು ಕಬಳಿಸಿದ್ದರು.

ಇದು ಮಾತ್ರವಲ್ಲದೇ 1983ರಲ್ಲಿ ವೆಸ್ಟ್​ ಇಂಡೀಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಜಯಿಸಿ ಚೊಚ್ಚಲ ವಿಶ್ವಕಪ್ ಅನ್ನು ಭಾರತಕ್ಕೆ ತಂದುಕೊಟ್ಟ ಹೆಗ್ಗಳಿಕೆ ಕಪಿಲ್​ ದೇವ್​ ಅವರಿಗಿದೆ.

ABOUT THE AUTHOR

...view details