ಲಡಾಖ್: ವಿಕೆಟ್ ಹಿಂದೆ ನಿಂತು ಗೆಲುವಿನ ರಣತಂತ್ರ ರೂಪಿಸುತ್ತಾ ಟೀಮ್ ಇಂಡಿಯಾದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಬಾರಿ ವಿಶೇಷವಾಗಿ ಸ್ವಾತಂತ್ರ್ಯ ದಿನ ಆಚರಿಸಿದ್ದಾರೆ.
ಸೇನೆಯಿಂದ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಗೌರವ ಪಡೆದಿರುವ ಧೋನಿ ಕಳೆದ ಹದಿನೈದು ದಿನದಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರ್ಯ ದಿನವಾದ ಇಂದು ಲಡಾಖ್ನ ಸೇನಾ ಆಸ್ಪತ್ರೆಗೆ ಭೇಟಿ ನೀಡಿ ಸೈನಿಕರೊಂದಿಗೆ ಅರ್ಥಪೂರ್ಣ ಸಮಯ ಕಳೆದಿದ್ದಾರೆ. ಈ ವೇಳೆ ಸೈನಿಕರು ಧೋನಿ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.