ಪಂಜಾಬ್: 13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಮತ್ತೊಂದು ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಹೋರಾಟ ನಡೆಸಲಿದ್ದು, ದಿನೇಶ್ ಕಾರ್ತಿಕ್ ನೇತೃತ್ವದ ಕೆಕೆಆರ್ ತಂಡಕ್ಕೆ ಇದು ಈ ಸಾಲಿನ ಚೊಚ್ಚಲ ಪಂದ್ಯವಾಗಿದೆ.
ಅಬುಧಾಬಿಯಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭಗೊಳ್ಳಲಿರುವ ಕಾರಣ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ವಿಶ್ ಮಾಡಿದ್ದಾರೆ.
'ಕರ್ಬೊ, ಲೊರ್ಬೊ, ಜೀತೋ' ಈಗಾಗಲೇ 2020 ಹೊಸ ಚೈತನ್ಯ ಹೊಂದಿದೆ. ಮತ್ತೊಂದು ಚಾಂಪಿಯನ್ಗಳು ಇಂದು ಮೈದಾನಕ್ಕಿಳಿಯಲಿದ್ದು, ಪ್ರತಿ ಮನೆಗೆ ಸಂತೋಷ ನೀಡಲು ಪ್ರಯತ್ನಿಸುತ್ತಿದ್ದಾರೆ. ಐಪಿಎಲ್ ಅಭಿಯಾನ ಆರಂಭಿಸುತ್ತಿರುವ ಕೆಕೆಆರ್ ರೈಡರ್ಸ್ ತಂಡಕ್ಕೆ ನನ್ನ ಶುಭಾಶಯಗಳು. ಕೆಕೆಆರ್ ಹೈ ತೈಯಾರ್ ಎಂದು ಟ್ವೀಟ್ ಮಾಡಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಸ್ಟ್ರೇಲಿಯಾದ ಕುಮ್ಮಿನ್ಸ್ ಇದ್ದು, ಅವರಿಗೆ 15.5 ಕೋಟಿ ರೂ. ನೀಡಿ ಖರೀದಿ ಮಾಡಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲು ಕಂಡಿದೆ.