ಡುನೆಡಿನ್: ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್ ರಾಸ್ ಟೇಲರ್ಗೆ ಗಾಯದ ಸಮಸ್ಯೆ ಎದುರಾಗಿರುವ ಕಾರಣ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಜಾಗಕ್ಕೆ ಬ್ಯಾಟ್ಸ್‌ಮನ್ ಮಾರ್ಕ್ ಚಾಪ್ಮನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯಾಸ ನಡೆಸುವ ವೇಳೆ ರಾಸ್ ಟೇಲರ್ ಎಡ ಮಂಡಿಗೆ ಗಾಯವಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಹೊರಗುಳಿಯಲಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ನ್ಯೂಜಿಲ್ಯಾಂಡ್ ಕಿವೀಸ್ ಕೋಚ್ ಗ್ಯಾರಿ ಸ್ಟೀಡ್ ತಿಳಿಸಿದ್ದಾರೆ.