ದುಬೈ: ಪಾಕಿಸ್ತಾನದ ಬ್ಯಾಟ್ಸ್ಮನ್ ಶಾನ್ ಮಸೂದ್ ಹಾಗೂ ಇಂಗ್ಲೆಂಡ್ ಆಲ್ರೌಂಡರ್ ಕ್ರಿಸ್ ವೋಕ್ಸ್ ನೂತನ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಭಾರೀ ಏರಿಕೆ ಕಂಡಿದ್ದಾರೆ.
ಶಾನ್ ಮಸೂದ್ ಮೊದಲ ಇನ್ನಿಂಗ್ಸ್ನಲ್ಲಿ 156 ರನ್ ಸಿಡಿಸಿದ್ದರು. ಇದರಿಂದ ಪಾಕಿಸ್ತಾನ 107 ರನ್ಗಳ ಮುನ್ನಡೆ ಸಾಧಿಸಿತ್ತು. ಭಾನುವಾರ ಬಿಡುಗಡೆಯಾಗಿರುವ ನೂತನ ರ್ಯಾಂಕಿಂಗ್ನಲ್ಲಿ ಶಾನ್ ಮಸೂದ್ 14 ಸ್ಥಾನ ಏರಿಕೆ ಕಂಡಿದ್ದಾರೆ. ಅವರು ತಮ್ಮ ವೃತ್ತಿ ಜೀವನದ ಶ್ರೇಷ್ಠ 19ನೇ ಸ್ಥಾನಕ್ಕೇರಿದ್ದಾರೆ. ಬಾಬರ್ ಅಜಮ್(6) ಬಿಟ್ಟರೆ ಟಾಪ್ 20ರಲ್ಲಿರುವ ಪಾಕಿಸ್ತಾನದ ಏಕೈಕ ಬ್ಯಾಟ್ಸ್ಮನ್ ಆಗಿದ್ದಾರೆ.
ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಲ್ರೌಂಡರ್ ಕ್ರಿಸ್ ವೋಕ್ಸ್ ಬ್ಯಾಟಿಂಗ್ ವಿಭಾಗದಲ್ಲಿ ಬಡ್ತಿ ಪಡೆದಿದ್ದಾರೆ. ಶನಿವಾರ ಅಂತ್ಯಗೊಂಡ ಪಂದ್ಯದಲ್ಲಿ ಅಜೇಯ 84 ರನ್ ಪೇರಿಸಿದ ವೋಕ್ಸ್ ಬ್ಯಾಟಿಂಗ್ ವಿಭಾಗದಲ್ಲಿ 18 ಸ್ಥಾನ ಏರಿಕೆ ಕಂಡು 78ನೇ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ವೋಕ್ಸ್ 7ನೇ ಸ್ಥಾನಕ್ಕೇರಿದ್ದಾರೆ. ಇದೇ ತಂಡದ ಸ್ಟೋಕ್ಸ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.