ಕರ್ನಾಟಕ

karnataka

ETV Bharat / sports

ಮಯಾಂಕ್ ನೂತನ ದಾಖಲೆ.. ಟೆಸ್ಟ್ ಕ್ರಿಕೆಟ್​ನಲ್ಲಿ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತದ 3ನೇ ಆಟಗಾರ - ಸಾವಿರ ರನ್ ಪೂರೈಸಿದ ಅಗರ್ವಾಲ್

ಟೀಂ ಇಂಡಿಯಾ ಮಾಜಿ ಆಟಗಾರ ವಿನೋದ್ ಕಾಂಬ್ಲಿ 14 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ರೆ, ಚೇತೇಶ್ವರ ಪೂಜಾರ 18 ಇನ್ನಿಂಗ್ಸ್‌ಗಳಲ್ಲಿ ಸಾವಿರ ರನ್​ ಪೂರೈಸಿ ಎರಡನೇ ಸ್ಥಾನದಲ್ಲಿದ್ದಾರೆ..

Mayank Agarwal
ಮಯಾಂಕ್ ಅಗರ್ವಾಲ್

By

Published : Dec 19, 2020, 12:10 PM IST

ಅಡಿಲೇಡ್ (ಆಸ್ಟ್ರೇಲಿಯಾ): ಟೀಂ ಇಂಡಿಯಾ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಟೆಸ್ಟ್​ ಕ್ರಿಕೆಟ್​ನಲ್ಲಿ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತದ 3ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನ ಸ್ಟಾರ್ಕ್ ಎಸೆತದಲ್ಲಿ ಬೌಂಡರಿ ಸಿಡಿಸಿದ ಅಗರ್ವಾಲ್, ಈ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸಾವಿರ ರನ್ ಪೂರೈಸಲು ಮಯಾಂಕ್ 19 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.

ಓದಿಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಟೀಂ ಇಂಡಿಯಾ ಕಳಪೆ ಪ್ರದರ್ಶನ: 36ಕ್ಕೆ 9 ವಿಕೆಟ್‌ ಕಳೆದುಕೊಂಡ ವಿರಾಟ್ ಪಡೆ

ಟೀಂ ಇಂಡಿಯಾ ಮಾಜಿ ಆಟಗಾರ ವಿನೋದ್ ಕಾಂಬ್ಲಿ 14 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ರೆ, ಚೇತೇಶ್ವರ ಪೂಜಾರ 18 ಇನ್ನಿಂಗ್ಸ್‌ಗಳಲ್ಲಿ ಸಾವಿರ ರನ್​ ಪೂರೈಸಿ ಎರಡನೇ ಸ್ಥಾನದಲ್ಲಿದ್ದಾರೆ. ಸುನಿಲ್ ಗವಾಸ್ಕರ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಸಾವಿರ ರನ್​ ಗಳಿಸಲು 21 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.

ABOUT THE AUTHOR

...view details