ವೆಲ್ಲಿಂಗ್ಟನ್:ನ್ಯೂಜಿಲ್ಯಾಂಡ್ ವಿರುದ್ಧ ನಾಳೆಯಿಂದ ಆರಂಭಗೊಳ್ಳಲಿರುವ ಮೂರು ಏಕದಿನ ಪಂದ್ಯಗಳ ಸರಣಿ ಹಾಗೂ ಟೆಸ್ಟ್ ಸರಣಿಯಿಂದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹೊರಬಿದ್ದಿರುವ ಕಾರಣ ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರವಾಲ್ ಆಯ್ಕೆಗೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಈಗಾಗಲೇ ಮಿಂಚು ಹರಿಸಿರುವ ಕನ್ನಡಿಗ ಮಯಾಂಕ್ ಅಗರವಾಲ್ ಇದೀಗ ಏಕದಿನ ಪಂದ್ಯದಲ್ಲೂ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಮಿಂಚು ಹರಿಸುವ ಸಾಧ್ಯತೆ ದಟ್ಟವಾಗಿದೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಗಾಯಗೊಂಡು ಹೊರಬಿದ್ದಿರುವ ಕಾರಣ ಆರಂಭಿಕರಾಗಿ ಮಯಾಂಕ್ ಅಗರವಾಲ್ ಕಣಕ್ಕಿಳಿಯಲಿದ್ದು, ಅವರಿಗೆ ಪೃಥ್ವಿ ಶಾ ಸಾಥ್ ನೀಡುವ ಸಾಧ್ಯತೆ ಇದೆ.
ಆರಂಭಿಕರಾಗಿ ಮಯಾಂಕ್-ಪೃಥ್ವಿ ಶಾ!?:ಸುದ್ದಿಗೋಷ್ಠಿ ವೇಳೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ ಎಂದು ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದು, ಆರಂಭಿಕರಾಗಿ ಪೃಥ್ವಿ ಶಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಶಾ ಜತೆ ಮಯಾಂಕ್ ಅಗರವಾಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.