ಹೈದರಾಬಾದ್: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನ ಇನ್ನಿಂಗ್ಸ್ವೊಂದರಲ್ಲಿ ಅತಿಹೆಚ್ಚು ರನ್ ಸಿಡಿಸಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ(400) ದಾಖಲೆ ಮುರಿಯುವ ಅವಕಾಶ ಸಿಗಬಹುದು ಎಂದು ಆಸೀಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೇಳಿದ್ರು.
ಪಾಕಿಸ್ತಾನದ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ್ದ ವಾರ್ನರ್ 335 ರನ್ ಗಳಿಸಿ ಔಟ್ ಆಗದೆ ಕ್ರಿಸ್‌ನಲ್ಲಿ ಉಳಿದಿದ್ದರು. ತಂಡದ ನಾಯಕ ಟಿಮ್ ಪೇನ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದರಿಂದ ವಾರ್ನರ್ಗೆ ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯವಾಗಲಿಲ್ಲ.