ಇಸ್ಲಾಮಾಬಾದ್:ಪಾಕಿಸ್ತಾನ ಕ್ರಿಕೆಟ್‌ನ ಅತ್ಯಂತ ಶಿಸ್ತಿನ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಮಾಜಿ ನಾಯಕ ಮಿಸ್ಬಾ ಉಲ್ ಹಕ್, ಪಾಕ್ ತಂಡದ ನೂತನ ಪ್ರಧಾನ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಅಲ್ಲಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಇದೀಗ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪುರುಷ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂಗ್ಲೆಂಡ್ನಲ್ಲಿ ನಡೆದ 2019ರ ಏಕದಿನ ವಿಶ್ವಕಪ್ನಲ್ಲಿ ಲೀಗ್ ಹಂತದಲ್ಲೇ ಪಾಕ್ ಟೂರ್ನಿಯಿಂದ ಹೊರಬಿದ್ದ ಕಾರಣ ತಂಡದ ಕೋಚ್ ಆಗಿದ್ದ ಮಿಕ್ಕಿ ಆರ್ಥರ್ ಹಾಗೂ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಹಾಗೂ ಬೌಲಿಂಗ್ ಕೋಚ್ ಅಜರ್ ಮೆಹಮೂದ್‌ರನ್ನು ಪಾಕ್ ಕ್ರಿಕೆಟ್ ಮಂಡಳಿ ವಜಾಗೊಳಿಸಿತ್ತು. ತದನಂತರ ನೂತನ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನ ಮಾಡಿತ್ತು.