ಮುಂಬೈ:2019ರಲ್ಲಿ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಹಾಗೂ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಕ್ರಮವಾಗಿ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿಶ್ವಕಪ್ನಲ್ಲಿ ಹ್ಯಾಟ್ರಿಕ್ ಪಡೆದಿದ್ದ ಮೊಹಮ್ಮದ್ ಶಮಿ 2019ರಲ್ಲಿ ಭಾರತದ ಪರ 21 ಪಂದ್ಯಗಳಾಡಿದ್ದು, 42 ವಿಕೆಟ್ ಪಡೆಯುವ ಮೂಲಕ ಈ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ನ್ಯೂಜಿಲ್ಯಾಂಡ್ನ ಟ್ರೆಂಟ್ ಬೌಲ್ಟ್ ಇದ್ದು, ಅವರು 20 ಪಂದ್ಯಗಳಿಂದ 38 ವಿಕೆಟ್ ಪಡೆದಿದ್ದಾರೆ. 3ನೇ ಸ್ಥಾನದಲ್ಲಿ ಲೂಕಿ ಫರ್ಗ್ಯುಸನ್(35), 4ನೇ ಸ್ಥಾನದಲ್ಲಿ ಬಾಂಗ್ಲಾದೇಶದ ಮುಸ್ತಫೀಜುರ್ ರಹಮಾನ್(34) 5ನೇ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್(33) ವಿಕೆಟ್ ಪಡೆದಿದ್ದಾರೆ.
ಐಪಿಎಲ್ ಬರೋಬ್ಬರಿ 15.5 ಕೋಟಿ ಪಡೆದಿರರುವ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ 12 ಪಂದ್ಯಗಳಿಂದ 59 ವಿಕೆಟ್ ಪಡೆಯುವ ಮೂಲಕ 2019ರಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಇಂಗ್ಲೆಂಡ್ನ ಸ್ಟುವರ್ಟ್ ಬ್ರಾಡ್(43), ತೃತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್(42), 4ನೇ ಸ್ಥಾನದಲ್ಲಿ ಕಿವೀಸ್ನ ನೈಲ್ ವ್ಯಾಗ್ನರ್(42) 5ನೇ ಸ್ಥಾನದಲ್ಲಿ ನಥನ್ ಲಿಯಾನ್(41) ಇದ್ದಾರೆ.
ಟಿ20 ಕ್ರಿಕೆಟ್ನಲ್ಲಿ ನೇಪಾಳದ ಕೆಸಿ ಕರಣ್,ಸಂದೀಪ್ ಲೆಮಿಚ್ಛಾನೆ ಹಾಗೂ ನೆದರ್ಲೆಂಡ್ನ ಗ್ಲೋವರ್ ಬಿ ಡಿ 28 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಐರ್ಲೆಂಡ್ನ ಮಾರ್ಕ್ ಅದಿರ್(27), 3ನೇ ಸ್ಥಾನದಲ್ಲಿ ನೆದರ್ಲೆಂಡ್ನ ವಾನ್ ಮೀಕರೆನ್(27) ಇದ್ದಾರೆ.
ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲೂ ಮೊಹಮ್ಮದ್ ಶಮಿ 33 ವಿಕೆಟ್ ಪಡೆದು ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.