ಮ್ಯಾಂಚೆಸ್ಟರ್:ವಿಶ್ವಕಪ್ ಲೀಗ್ನಲ್ಲಿ ಅಫ್ಘಾನಿಸ್ತಾನ ತಂಡದ ಎದುರು ಹ್ಯಾಟ್ರಿಕ್ ವಿಕೆಟ್ ಸಾಧಿಸಿದ ಮೊಹಮ್ಮದ್ ಶಮಿಗೆ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವಕಾಶ ನೀಡಿಲ್ಲ. ಹೀಗಾಗಿ ಅಭಿಮಾನಿಗಳು ಗರಂ ಆಗಿದ್ದಾರೆ.
ಹ್ಯಾಟ್ರಿಕ್ ವಿಕೆಟ್ ಪಡೆದ ಹೀರೋಗಿಲ್ಲ ಸೆಮೀಸ್ನಲ್ಲಿ ಸ್ಥಾನ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ! - ನ್ಯೂಜಿಲ್ಯಾಂಡ್
ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೊಹಮ್ಮದ್ ಶಮಿಗೆ ಸೆಮಿಫೈನಲ್ನಲ್ಲಿ ಆಡುವ 11ರ ಬಳಗದಿಂದ ಹೊರಗಿಟ್ಟಿದ್ದು, ಇದೇ ವಿಚಾರ ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಆರಂಭದಲ್ಲಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶಮಿ, ಭುವನೇಶ್ವರ್ ಕುಮಾರ್ ಗಾಯಗೊಂಡಾಗ ಅಫ್ಘಾನಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಇದಾದ ಬಳಿಕ ವೆಸ್ಟ್ ಇಂಡೀಸ್, ಇಂಗ್ಲೆಂಡ್ ಸೇರಿದಂತೆ ಕೇವಲ 4 ಪಂದ್ಯಗಳಲ್ಲಿ ಕಣಕ್ಕಿಳಿದಿದು 14 ವಿಕೆಟ್ ಪಡೆದುಕೊಂಡಿದ್ದಾರೆ.
ವಿಶ್ವಕಪ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರೂ ಅವರಿಗೆ ಅವಕಾಶ ನೀಡದ್ದಕ್ಕಾಗಿ ಕೊಹ್ಲಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದು, ಆಡುವ 11ರ ಬಳಗದಿಂದ ಅವರನ್ನ ಹೊರಗಿಡಲು ಕಾರಣವೇನು ಎಂದು ಪ್ರಶ್ನೆ ಮಾಡಿದ್ದಾರೆ. ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಹಾಗೂ ಕಾಮೆಂಟೆೇಟರ್ ಹರ್ಷ ಬೋಗ್ಲೆ ಸಹ ಇದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.