ನವದೆಹಲಿ:ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ದೇಶಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಖ್ಯಾತ ಕ್ರಿಕೆಟಿಗ ಎಂ.ಎಸ್.ಧೋನಿ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.
ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು.1929 ಗಂಟೆಯಿಂದ ನನ್ನನ್ನು ನಿವೃತ್ತ (ಸಿಕ್) ಎಂದು ಪರಿಗಣಿಸಿ. ಔಪಚಾರಿಕ ಪ್ರಕಟಣೆಯ ಪೋಸ್ಟ್ ಅನ್ನು ಓದಿ ಎಂದು ಬರೆದುಕೊಂಡಿದ್ದಾರೆ.
ಭಾರತದ 74ನೇ ಸ್ವಾತಂತ್ರ್ಯ ದಿನಾಚರಣೆಯಂದೇ ಧೋನಿ ನಿವೃತ್ತಿಯ ಘೋಷಿಸಿದ್ದು ವಿಶೇಷವಾಗಿದೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ತಮ್ಮ ಇನ್ಸ್ಟಾದಲ್ಲಿ ನಿವೃತ್ತರಾಗುತ್ತಿರುವ ಬಗ್ಗೆ ಪೋಸ್ಟ್ ಮಾಡಿದ್ದರೂ ಧೋನಿ ಅವರು ಯುಎಇನಲ್ಲಿ ಮುಂಬರುವ ಐಪಿಎಲ್ 2020 ಟೂರ್ನಿಯಲ್ಲಿ ಆಡುವ ನಿರೀಕ್ಷೆಯಿದೆ. ಇಂದು ಚೆನ್ನೈಗೆ ಆಗಮಿಸುವ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತರಬೇತಿ ಶಿಬಿರಕ್ಕೆ ಆಗಮಿಸುತ್ತಿದ್ದರು.