ಚೆನ್ನೈ: ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮಿಂಚು ಹರಿಸಲು ಸಖತ್ ತಯಾರಿ ನಡೆಸಿದ್ದಾರೆ.
ಅಭ್ಯಾಸದ ವೇಳೆ ಧೋನಿ ಸಿಡಿಸಿದ ಸಿಕ್ಸರ್ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ ರೈನಾ - ಚೆನ್ನೈ ಸೂಪರ್ ಕಿಂಗ್ಸ್
13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಧೋನಿ ಬ್ಯಾಟಿಂಗ್ ವೈಖರಿ ನೋಡಲು ಎಲ್ಲರೂ ತುದಿಗಾಲಿನ ಮೇಲೆ ನಿಂತಿದ್ದಾರೆ. ಇದರ ಮಧ್ಯೆ ಅವರು ಭಾಗಿಯಾಗಿದ್ದ ಅಭ್ಯಾಸ ಶಿಬಿರದಲ್ಲಿ ಸಿಕ್ಸರ್ಗಳ ಮಳೆ ಸುರಿಸಿದ್ದಾರೆ.
ಚೆನ್ನೈನ ಚಿದಂಬರಂ ಮೈದಾನದಲ್ಲಿ ನಡೆದ ಅಭ್ಯಾಸ ಶಿಬಿರದಲ್ಲಿ ಮಹೇಂದ್ರ ಸಿಂಗ್ ಧೋನಿ ಮೈದಾನದ ಎಲ್ಲ ಮೂಲೆ ಮೂಲೆಗಳಿಗೂ ಸಿಕ್ಸರ್ ಸಿಡಿಸಿದ್ದಾರೆ. ಧೋನಿ ಸಿಕ್ಸರ್ ಸಿಡಿಸುತ್ತಿದ್ದಂತೆ ತಂಡದ ಮತ್ತೋರ್ವ ಆಟಗಾರ ಸುರೇಶ್ ರೈನಾ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಇದರ ವಿಡಿಯೋ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಟ್ವಿಟರ್ನಲ್ಲಿ ಹಾಕಿಕೊಂಡಿದೆ.
ಐದು ದಿನಗಳ ಕಾಲ ಪ್ಲೇಯರ್ಸ್ ಅಭ್ಯಾಸ ಶಿಬಿರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಧೋನಿ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ತಂಡದ ಮ್ಯಾನೇಜರ್ ವಿಶ್ವನಾಥನ್ ತಿಳಿಸಿದ್ದಾರೆ. ಸೆಪ್ಟೆಂಬರ್ 19ರಿಂದ ಆರಂಭಗೊಳ್ಳಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾಗಿಯಾಗಲು ಚೆನ್ನೈ ಸೂಪರ್ ಕಿಂಗ್ಸ್ ಇಂದು ದುಬೈಗೆ ಪ್ರಯಾಣ ಬೆಳೆಸಿತು.