ರಾಂಚಿ:ಇಂಗ್ಲೆಂಡ್ನಲ್ಲಿನ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಎಂ.ಎಸ್. ಧೋನಿ ಮೈದಾನಕ್ಕಿಳಿದಿಲ್ಲ. ಸರಿಸುಮಾರು ನಾಲ್ಕು ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದ ರಾಂಚಿ ಬಾಯ್ ಇದೀಗ ದಿಢೀರ್ ಆಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಬಾಂಗ್ಲಾದೇಶದೊಂದಿಗಿನ ಟೆಸ್ಟ್ ಸರಣಿ ಮುಕ್ತಾಯಗೊಳ್ಳುತ್ತಿದ್ದಂತೆ ವೆಸ್ಟ್ ಇಂಡೀಸ್ ಸರಣಿ ಆರಂಭಗೊಳ್ಳಲಿದೆ. ಅದಕ್ಕಾಗಿ ತಂಡ ಸೇರಿಕೊಳ್ಳುವ ಉದ್ದೇಶದಿಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂ.ಎಸ್. ಧೋನಿ ನೆಟ್ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಜೆಎಸ್ಸಿಎ ಮೈದಾನದಲ್ಲಿ ಧೋನಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ದೊರೆತಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿದೆ.