ದುಬೈ:ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಫೈನಲ್ನಲ್ಲಿ 200ನೇ ಪಂದ್ಯವನ್ನಾಡುತ್ತಿದ್ದು, ಧೋನಿ ನಂತರ ಈ ಮೈಲುಗಲ್ಲು ತಲುಪಿದ ಮೊದಲ ಆಟಗಾರನಾಗಿದ್ದಾರೆ.
2008ರಲ್ಲಿ ಡೆಕ್ಕನ್ ಚಾರ್ಜಸ್ ಪರ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, 2009ರಲ್ಲಿ ಆ ತಂಡ ಚಾಂಪಿಯನ್ ಆಗಲು ಪ್ರಮುಖ ಪಾತ್ರವಹಿಸಿದ್ದರು. ನಂತರ 2011ರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್ರನ್ನು ಖರೀದಿಸಿತ್ತು. ರೋಹಿತ್ ಮುಂಬೈ ತಂಡದಲ್ಲಿ ನಾಯಕನಾಗಿ 4 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದಾರೆ.