ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಟಾಸ್ ಗೆದ್ದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ 8 ಪಂದ್ಯಗಳಲ್ಲಿ 6 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಿ ಪ್ಲೇ ಆಫ್ಗೆ ಹತ್ತಿರವಾಗುವ ಆಲೋಚನೆಯಲ್ಲಿದೆ.
ಇತ್ತ ಸಾಲು ಸಾಲು ಸೋಲುಗಳ ಬಳಿಕ ಕೊನೆಯ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳಿರುವ ಪಂಜಾಬ್ ತಂಡ ಪ್ಲೇ ಆಫ್ ಕನಸನ್ನು ನನಸು ಮಾಡಿಕೊಳ್ಳಲು ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಪಂಜಾಬ್ ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಸೋಲು ಕಂಡಿದ್ದರೆ 2 ರಲ್ಲಿ ಗೆಲುವು ಪಡೆದು ಕೊನೆಯ ಸ್ಥಾನದಲ್ಲಿದೆ.
ಮುಂಬೈ ತಂಡ: ಕ್ವಿಂಟನ್ ಡಿ ಕಾಕ್ (ವಿ.ಕೀ), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಟ್ರೆಂಟ್ ಬೌಲ್ಟ್ / ಮಿಚೆಲ್ ಮೆಕ್ಲೆನಾಘನ್, ಜಸ್ಪ್ರಿತ್ ಬೂಮ್ರಾ.
ಪಂಜಾಬ್ ತಂಡ: ಕೆ.ಎಲ್. ರಾಹುಲ್ (ನಾಯಕ / ವಿ.ಕೀ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕೆ ಗೌತಮ್, ಕ್ರಿಸ್ ಜೋರ್ಡಾನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.