ನವದೆಹಲಿ: ಭಾರತದೆದುರು ಜೂನ್ನಲ್ಲಿ ನಡೆಯಲಿರುವ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸೇರಿದಂತೆ ಬೇಸಿಗೆಯಲ್ಲಿ ತವರಿನಲ್ಲಿ ನಡೆಯಲಿರುವ ಸರಣಿಗಳಿಗೆ ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ 20 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಬಾಂಗ್ಲಾದೇಶದ ವಿರುದ್ಧ ನಡೆದ ಸರಣಿಯಲ್ಲಿ ವಿಶ್ರಾಂತಿ ಪಡೆದಿದ್ದ ಕೇನ್ ವಿಲಿಯಮ್ಸನ್ ತಂಡಕ್ಕೆ ಮರಳಿದ್ದಾರೆ. ಇನ್ನು ಡೊಮೆಸ್ಟಿಕ್ ಸ್ಟಾರ್ಗಳಾದ ಡಾಗ್ ಬ್ರಾಸ್ವೆಲ್, ಜಾಕೋಬ್ ಡಫ್ಫಿ ಮತ್ತು ರಚಿನ್ ರವೀಂದ್ರ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ವೈಟ್ ಬಾಲ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ತೋರಿರುವ ಡಿವೋನ್ ಕಾನ್ವೆರನ್ನು ಕೂಡ ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.