ವೆಲ್ಲಿಂಗ್ಟನ್:ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಅನ್ನು ಐಸಿಸಿ ಮುಂದೂಡುತ್ತಿದ್ದಂತೆ ಬಿಸಿಸಿಐ ಐಪಿಎಲ್ ನಡೆಸಲು ಸಿದ್ದವಾಗುತ್ತಿದೆ. ಈಗಾಗಲೇ ಐಪಿಎಲ್ ಆಧ್ಯಕ್ಷ ಬ್ರಿಜೇಶ್ ಪಟೇಲ್, ಯುಎಇನಲ್ಲಿ ಟೂರ್ನಿ ನಡೆಸುವುದಾಗಿ ಹೇಳಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯಲು ಮನವಿಯನ್ನು ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ.
ಈ ಬಾರಿಯ ಐಪಿಎಲ್ ನಡೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆ ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ತನ್ನ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಅನುಮತಿ ನೀಡುವುದಾಗಿ ತಿಳಿಸಿವೆ. ಆದರೆ ಸುರಕ್ಷತೆಗೆ ಸಂಬಂಧಿಸಿದ ಪ್ರೋಟೋಕಾಲ್ಗಳನ್ನು ಆಟಗಾರರೇ ನೋಡಿಕೊಳ್ಳಬೇಕೆಂದು ತಿಳಿಸಿದೆ.